ಕೊಡಗು ಜಿಲ್ಲೆಯ ವಿವಿಧೆಡೆ ಮಳೆ

September 12, 2020

ಮಡಿಕೇರಿ ಸೆ.12 : ಕೊಡಗು ಜಿಲ್ಲೆಯ ವಿವಿಧೆಡೆ ನಿರಂತರವಾಗಿ ಮಳೆಯಾಗುತ್ತಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ಮಡಿಕೇರಿ ಹಾಗೂ ನಾಪೋಕ್ಲು ಭಾಗದಲ್ಲೂ ಉತ್ತಮ ಮಳೆಯಾಗುತ್ತಿದ್ದು, ಚಳಿಯ ವಾತಾವರಣ ಮನೆ ಮಾಡಿದೆ. ಸೋಮವಾರಪೇಟೆ ಮತ್ತು ವಿರಾಜಪೇಟೆ ತಾಲ್ಲೂಕಿನ ವಿವಿಧೆಡೆ ಬೆಳಗ್ಗಿನಿಂದಲೇ ಮಳೆಯಾಗುತ್ತಿದೆ. ಇನ್ನೆರಡು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

error: Content is protected !!