ಕಲ್ಲುಮೊಟ್ಟೆ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ

12/09/2020

ಮಡಿಕೇರಿ ಸೆ.12 : ಡಾ.ಅಂಬೇಡ್ಕರ್ ಯುವಕ ಸಂಘದ ಮನವಿಯನ್ನು ಪುರಸ್ಕರಿಸಿರುವ ನಾಪೋಕ್ಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ ಅವರು ಕಲ್ಲುಮೊಟ್ಟೆ ಗ್ರಾಮಕ್ಕೆ ವಿದ್ಯುತ್ ದೀಪಗಳ ವ್ಯವಸ್ಥೆಯನ್ನು
ಕಲ್ಪಿಸಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ವಿದ್ಯುತ್ ದೀಪಗಳಿಲ್ಲದೆ ಗ್ರಾಮಸ್ಥರು ಆತಂಕದಲ್ಲೇ ದಿನ ಕಳೆಯುತ್ತಿದ್ದರು. ಇದನ್ನು ಮನಗಂಡು ಯುವಕ ಸಂಘ ಗ್ರಾ.ಪಂ ಗೆ ಮನವಿ ಸಲ್ಲಿಸಿತ್ತು.
ವಿದ್ಯುತ್ ದೀಪಗಳನ್ನು ಅಳವಡಿಸಲು ಕಾರಣಕರ್ತರಾದ ಅಭಿವೃದ್ಧಿ ಅಧಿಕಾರಿಗೆ ಸಂಘದ ಪ್ರಮುಖ ಬಷೀರ್ ಹಾಗೂ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.