35 ಕೋವಿಡ್ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ

13/09/2020

ಮಡಿಕೇರಿ : ಜಿಲ್ಲೆಯಲ್ಲಿ ಇಂದು 35 ಕೋವಿಡ್ ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 33127 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, 271 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಒಟ್ಟು 11,520 ಮಂದಿ ಸಂಪರ್ಕ ತಡೆಯಲ್ಲಿದ್ದು, ಕೋವಿಡ್ ಆಸ್ಪತ್ರೆಯಲ್ಲಿ 83 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.