ಎನ್.ಮಹಾಬಲೇಶ್ವರ ಭಟ್ ದತ್ತಿ ಕಾರ್ಯಕ್ರಮ

13/09/2020

ಮಡಿಕೇರಿ ಸೆ.13 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಮೂರ್ನಾಡು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸೆ.18 ರಂದು ಎನ್.ಮಹಾಬಲೇಶ್ವರ ಭಟ್ ದತ್ತಿ ಕಾರ್ಯಕ್ರಮ ಮರಗೋಡು ಗ್ರಾಮದಲ್ಲಿ ನಡೆಯಲಿದೆ ಎಂದು ಪರಿಷತ್ ನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ.
ಭಾರತಿ ಸಂಯುಕ್ತ ಕಾಲೇಜು ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಕನ್ನಡ ವಿಷಯದಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ನೀಡಲಾಗುವುದು ಎಂದು ಹೇಳಿದ್ದಾರೆ.