ಎಲ್‍ಪಿಜಿ ಪೈಪ್ ಲೈನ್ ಉದ್ಘಾಟಿಸಿದ ಪ್ರಧಾನಿ

14/09/2020

ಪಾಟ್ನಾ ಸೆ.14 : ದುರ್ಗಾಪುರ-ಬಂಕಾ ವಿಭಾಗದ ಎಲ್ ಪಿಜಿ ಪೈಪ್ ಲೈನ್ ನ್ನು ಭಾನುವಾರ ಉದ್ಘಾಟಿಸಿರುವ ಪ್ರಧಾನಿ ನರೇಂದ್ರ ಮೋದಿ, ಪೂರ್ವ ಭಾರತ ಮತ್ತು ಬರುವ ಅಕ್ಟೋಬರ್-ನವೆಂಬರ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಿಹಾರದ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಎಲ್ ಪಿ ಜಿ ಪೈಪ್ ಲೈನ್, ಬಂಕಾ ಹಾಗೂ ಪೂರ್ವ ಚಂಪಾರಣ್ ನಲ್ಲಿ ಎರಡು ಎಲ್ ಪಿಜಿ ಬಾಟ್ಲಿಂಗ್ ಸ್ಥಾವರಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ಬಿಹಾರ ಮತ್ತು ಪೂರ್ವ ಭಾರತದ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಬಿಹಾರ ಮತ್ತು ಪೂರ್ವ ಭಾಗದ ಪ್ರದೇಶಗಳು ಅಭಿವೃದ್ಧಿ ಹೊಂದದ ಹೊರತು ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲು ಸಾಧ್ಯವಿಲ್ಲ ಎಂದು ತಾವು ಬಹಳ ಹಿಂದಿನಿಂದಲೂ ಹೇಳುತ್ತಾ ಬಂದಿರುವುದಾಗಿ ತಿಳಿಸಿದರು.