ಕೋವಿಡ್ ಗೆದ್ದ 105 ವರ್ಷದ ವೃದ್ಧೆ

September 14, 2020

ಮಡಿಕೇರಿ ಸೆ.14 : ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ 105 ವರ್ಷದ ಕಮಲಮ್ಮ ಲಿಂಗನಗೌಡ ಹಿರೇಗೌಡ್ರ ಅವರು, ಸೋಂಕು ತಗುಲಿದ್ದರೂ ಮನೆಯಲ್ಲಿಯೇ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹಾಟ್’ಸ್ಪಾಟ್ ಎಂದೇ ಹೇಳಲಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿ ನಿತ್ಯವೂ ಸಾಲು ಸಾಲು ಸಾವುಗಳು ಸಾಮಾನ್ಯ ಎನ್ನುವಂತಾಗಿದೆ. ಇದರ ಮಧ್ಯೆಯೂ ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ 105 ವರ್ಷದ ಕಮಲಮ್ಮ ಲಿಂಗನಗೌಡ ಹಿರೇಗೌಡ್ರ ಅವರು, ಸೋಂಕು ತಗುಲಿದ್ದರೂ ಮನೆಯಲ್ಲಿಯೇ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
ಕಳೆದವಾರವಷ್ಟೇ ಕಮಲಮ್ಮ ಅವರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೊಪ್ಪಳದ ಅವರ ಪುತ್ರ ಶಂಕರಗೌಡ ಅವರ ನಿವಾಸದಲ್ಲಿ ಹೋಮ್ ಐಸೋಲೇಷನ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.

error: Content is protected !!