ವಿರಾಜಪೇಟೆಯಲ್ಲಿ ಬಗರ್ ಹುಕುಂ ಅಕ್ರಮ-ಸಕ್ರಮ ಸಮಿತಿಯ ನೂತನ ಕಚೇರಿ ಉದ್ಘಾಟನೆ
14/09/2020

ಮಡಿಕೇರಿ ಸೆ. 14 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಅಕ್ರಮ-ಸಕ್ರಮ
ಸಮಿತಿಯ ನೂತನ ಕಚೇರಿಯನ್ನು ಇಂದು ಉದ್ಘಾಟಿಸಲಾಯಿತು.
ವಿರಾಜಪೇಟೆಯ ಐಬಿ ಸಮೀಪವಿರುವ ಪಿ.ಡಬ್ಲ್ಯೂ.ಡಿ. ಕಚೇರಿ ಆವರಣದಲ್ಲಿ ಕಚೇರಿ ಕಾರ್ಯ ನಿರ್ವಹಿಸಲಿದೆ. ಸಮಿತಿಯ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಞಂಗಡ ಅರುಣ್ ಭೀಮಯ್ಯ ಮತ್ತಿತರರು ಈ ಸಂದರ್ಭ ಹಾಜರಿದ್ದರು.

