ತೆಕ್ಕಿಲ್ ಪ್ರತಿಷ್ಠಾನದಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಮಡಿಕೇರಿ ಸೆ. 14 : ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ತೆಕ್ಕಿಲ್ ಶಾಲೆಯಲ್ಲಿ ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿಗಳನ್ನು ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ವಿಧಾನ ಪರಿಷತ್‍ನ ವಿರೋಧ ಪಕ್ಷದ ಮುಖ್ಯ ಸಚೇತಕ ಎಂ. ನಾರಾಯಣ ಸ್ವಾಮಿಯವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಾಹೀದ್ ತೆಕ್ಕಿಲ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕೆ.ಆರ್.ಗಂಗಾಧರ್, ಸುಳ್ಯ ವರ್ತಕರ ಸಂಘ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ವಾಸುದೇವ ಕಟ್ಟೆ ಮನೆ, ಅರಂತೋಡು ಪಂ. ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ತೆಕ್ಕಿಲ್ ಶಾಲಾ ಮುಖ್ಯೋಪದ್ಯಾಯ ದಾಮೋಧರ್, ಪಠೇಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬದುರುದ್ದೀನ್, ಟಿ.ಎಂ.ಜಾವೇದ್ ತೆಕ್ಕಿಲ್, ಟಿ.ಎಂ. ಶಾಝ್ ತೆಕ್ಕಿಲ್, ಅಶ್ರಫ್ ಗುಂಡಿ, ಮೊದಲಾದವರು ಉಪಸ್ಥಿತರಿದ್ದರು.
