ಕೆ. ನಿಡುಗಣೆಯಲ್ಲಿ ಮನೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಸಚಿವ ವಿ.ಸೋಮಣ್ಣ
14/09/2020

ಮಡಿಕೇರಿ ಸೆ.14 : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಪ್ರವಾಹ ಪೀಡಿತ ಸಂತ್ರಸ್ತರಿಗೆ ಕೆ.ನಿಡುಗಣೆ (ಆರ್.ಟಿ.ಒ ಕಚೇರಿ) ಬಳಿ ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿ ಪರಿವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ಜಿ.ಪಂ ಅಧ್ಯಕ್ಚರಾದ ಬಿ.ಎ.ಹರೀಶ್, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಇತರರು ಇದ್ದರು.
ಬಳಿಕ ಜಂಬೂರಿನ ಕಾರ್ಯಪ್ಪ ಬಡಾವಣೆಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲ್ಲಿ ಪೂಜೆ ನೇರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಅಪ್ಪಚ್ಚು ರಂಜನ್, ಸುನೀಲ್ ಸುಬ್ರಹ್ಮಣ್ಯಿ, ಜಿ.ಪಂ ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ ಸಿಇಒ ಭನ್ವರ್ ಸಿಂಗ್ ಮೀನಾ, ರಾಜೀವ್ ಗಾಂಧಿ ವಸತಿ ನಿಗಮದ ಯೋಜನಾ ನಿರ್ದೇಶಕರಾದ ಶ್ರೀನಿವಾಸ್ ಇತರರು ಇದ್ದರು.

