ಸೆ.26 ರಂದು ಸಣ್ಣ ಕಥೆ ಬರೆಯುವ ಸ್ಪರ್ಧೆ
14/09/2020

ಮಡಿಕೇರಿ ಸೆ.14 : ಸೋಮವಾರಪೇಟೆ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕಥೆಗಾರ್ತಿ ಶ್ರೀಮತಿ ಕೊಡಗಿನ ಗೌರಮ್ಮ ಅವರ ಹೆಸರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆಗಳನ್ನು ಬರೆಯುವ ಸ್ಪರ್ಧೆ ನಡೆಯಲಿದೆ ಎಂದು ಪರಿಷತ್ ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 26 ಬೆಳಗ್ಗೆ 11.30ಕ್ಕೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿಯ ಕ.ಸಾ.ಪ ದ ಜಿಲ್ಲಾ ಕಚೇರಿಯಲ್ಲಿ ಸ್ಪರ್ಧೆ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9980988123 ಅಥವಾ 8277066123 ಸಂಪರ್ಕಿಸಲು ಕೋರಿದ್ದಾರೆ.
