ಮತ್ತಷ್ಟು ದಂಧೆಕೋರರ ಬಂಧನ ಸಾಧ್ಯತೆ

15/09/2020

ಬೆಂಗಳೂರು ಸೆ.15 : ಕನ್ನಡ ಚಿತ್ರರಂಗವನ್ನೇ ಬೆಚ್ಚಿ ಬೀಳಿಸಿರುವ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನವಾರ ಮಹತ್ವದ ತನಿಖೆ ನಡೆಯಲಿದ್ದು, ಮತ್ತಷ್ಟು ಬಂಧನವಾಗುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈವರೆಗೂ ಒಂದು ಹಂತದ ತನಿಖೆ ಮಾತ್ರ ನಡೆದಿದೆ. ಮುಂದಿನ ವಾರದಿಂದ ಮಹತ್ವದ ತನಿಖೆ ನಡೆಯಲಿದ್ದು, ಯಾರ್ಯಾರು ಈ ಜಾಲದಲ್ಲಿ ಭಾಗಿಯಾಗಿದ್ದಾರೋ ಅವರೆಲ್ಲರ ಹೆಸರುಗಳು ಬಹಿರಂಗಗೊಳ್ಳಲಿವೆ. ಈವರೆಗೂ ನಡೆದಿರುವ ತನಿಖೆಗಿಂತ ಮುಂದಿನ ವಾರ ನಡೆಯುವ ತನಿಖೆ ಅತ್ಯಂತ ಮಹತ್ವದ್ದು, ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ನಾನು ಸದ್ಯದ ಮಟ್ಟಿಗೆ ಬಹಿರಂಗ ಪಡಿಸುವುದಿಲ್ಲ. ಏಕೆಂದರೆ ತನಿಖೆ ಪ್ರಗತಿಯಲ್ಲಿರುವುದರಿಂದ ಅದು ಬೇರೆ ರೀತಿಯ ಪರಿಣಾಮ ಬೀರುತ್ತದೆ. ಎಲ್ಲವನ್ನೂ ಮಾಧ್ಯಮಗಳ ಮುಂದೆ ಬಹಿರಂಗ ಪಡಿಸುವುದಿಲ್ಲ. ಎಲ್ಲವೂ ನಿಮಗೆ ಗೊತ್ತಾಗಲಿದೆ ಎಂದು ಸೂಚ್ಯವಾಗಿ ಹೇಳಿದ್ದಾರೆ.