ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

15/09/2020

ಮಡಿಕೇರಿ ಸೆ.15 : ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನವನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸುರಯ್ಯ ಅಬ್ರಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪಕ್ಷ ಸಂಘಟನೆಯಲ್ಲಿ ಮಹಿಳೆಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.
ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ ಅವರ ಸೂಚನೆಯಂತೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮಹಿಳಾ ಘಟಕವನ್ನು ಬೂತ್ ಮಟ್ಟದಿಂದಲೇ ಬಲಿಷ್ಠಗೊಳಿಸಲಾಗುವುದು ಎಂದರು.
ಹಿರಿಯ ಮುಖಂಡ ಟಿ.ಪಿ.ರಮೇಶ್ ಅವರು ಮಾತನಾಡಿ ಅಖಿಲ ಭಾರತ ಕಾಂಗ್ರೆಸ್ಸಿನ ಆಶ್ರಯದಲ್ಲಿ ಮಹಿಳಾ ಕಾಂಗ್ರೆಸ್ಸಿನ ರಾಷ್ಟ್ರೀಯ ಘಟಕವನ್ನು ಅಸ್ತಿತ್ವಕ್ಕೆ ತರಲಾಗಿದ್ದು, ಇದರ ಮೊದಲ ಅಧ್ಯಕ್ಷರಾಗಿ 1984 ರಿಂದ 1988ರ ವರೆಗೆ ಬೇಗಂ ಅಭಿದಾ ಅಹಮ್ಮದ್ ಕಾರ್ಯನಿರ್ವಹಿಸಿದರು. ನಂತರದ ದಿನಗಳಲ್ಲಿ 9 ಮಂದಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳಾ ಘಟಕದಲ್ಲಿ ಕಾರ್ಯ ನಿರ್ವಹಿಸಿ ಪ್ರಸ್ತುತ ಸುಶ್ಮಿತಾದೇವ್ ಅವರು ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ ಎಂದರು. ಮಹಿಳೆಯರು ರಾಜಕೀಯವಾಗಿ ಗುರುತಿಸಿಕೊಳ್ಳಬೇಕೆಂದು ಕರೆ ನೀಡಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ಪ್ರಧಾನ ಕಾರ್ಯದರ್ಶಿ ಎ.ಪಿ.ಚಂದ್ರಶೇಖರ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಫ್ಯಾನ್ಸಿಪಾರ್ವತಿ, ಸೇವಾದಳದ ಹೆಚ್.ಕೆ.ಪ್ರೇಮ, ಪ್ರಮುಖರಾದ ಮುಮ್ತಾಜ್ ಬೇಗ್, ಶಶಿ, ವೀಣಾ ಶ್ರೀಧರ್, ನಗರಸಭೆ ಮಾಜಿ ಸದಸ್ಯರಾದ ಪ್ರಕಾಶ್ ಆಚಾರ್ಯ, ಕಚೇರಿ ಸಿಬ್ಬಂದಿಗಳಾದ ರಾಣಿ, ಉಷಾ ಮತ್ತಿತರರು ಹಾಜರಿದ್ದರು. ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್ ಸ್ವಾಗತಿಸಿ, ನಗರಸಭೆ ಮಾಜಿ ಸದಸ್ಯೆ ತಜಸ್ಸುಂ ವಂದಿಸಿದರು. ಸಭಾ ಕಾರ್ಯಕ್ರಮಕ್ಕೂ ಮೊದಲು ಸುರಯ್ಯ ಅಬ್ರಾರ್ ಅವರು ಧ್ವಜಾರೋಹಣ ನೆರವೇರಿಸಿದರು.