ತೆಕ್ಕಿಲ್ ಪ್ರತಿಷ್ಠಾನದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್‍ಗೆ ಸನ್ಮಾನ

15/09/2020

ಮಡಿಕೇರಿ ಸೆ. 15 : ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ವತಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಲೀಮ್ ಅಹ್ಮದ್ ಅವರು ಎನ್‍ಎಸ್‍ಯುಐ ರಾಜ್ಯ ಮತ್ತು ರಾಷ್ಟ್ರೀಯ ಅಧ್ಯಕ್ಷರಾಗಿ, ಆಲ್ ಇಂಡಿಯಾ ಯುವ ಕಾಂಗ್ರೇಸ್‍ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ, ವಿಧಾನ ಪರಿಷತ್‍ನ ಮುಖ್ಯ ಸಚೇತಕರಾಗಿ, ಎಐಸಿಸಿಯ ಕಾರ್ಯದರ್ಶಿಯಾಗಿ, ಕೇಂದ್ರ ಸರಕಾರದ ನೆಹರು ಯುವ ಕೇಂದ್ರದ ಮಾಜಿ ಮಹಾ ನಿರ್ದೇಶಕರಾಗಿ, ಸಿದ್ದರಾಮಯ್ಯ ಅವರ ಸರಕಾರದ ಅವಧಿಯಲ್ಲಿ ರಾಜ್ಯದ ದೆಹಲಿ ಪ್ರತಿನಿಧಿಯಾಗಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ, ದೇಶದಲ್ಲಿ ಮತ್ತು ರಾಜ್ಯದಲ್ಲಿ ವಿದ್ಯಾರ್ಥಿಗಳ, ಯುವಕರ ಸಮಸ್ಯೆಗಳಿಗೆ ಸ್ಪಂದಿಸಿರುವುದನ್ನು ಪರಿಗಣಿಸಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕರ್ನಾಟಕ ಸರಕಾರದ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ವಿಧಾನ ಪರಿಷತ್‍ನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎಂ.ನಾರಾಯಣ ಸ್ವಾಮಿ, ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಾಹೀದ್ ತೆಕ್ಕಿಲ್, ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಕೆ.ಆರ್.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ ಹಾಗೂ ಮತ್ತಿತರರು ಹಾಜರಿದ್ದರು.