ಜೆಡಿಎಸ್ ಅಲ್ಪಸಂಖ್ಯಾತರ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಎಂ.ಎ. ರುಬೀನ ಆಯ್ಕೆ

15/09/2020

ಮಡಿಕೇರಿ ಸೆ. 15 : ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳದ ಅಲ್ಪಸಂಖ್ಯಾತ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಎಂ.ಎ. ರುಬೀನ ಆಯ್ಕೆಯಾಗಿದ್ದಾರೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರ ಆದೇಶದ ಮೇರೆಗೆ ಇವರನ್ನು ನೇಮಿಸಲಾಗಿದೆ ಎಂದು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.