ಸಲೀಂ ಅಹಮ್ಮದ್ ರನ್ನು ಸನ್ಮಾನಿಸಿದ ಕೊಡಗು ಕಾಂಗ್ರೆಸ್

15/09/2020

ಮಡಿಕೇರಿ ಸೆ.15 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.
ಸಲೀಂ ಆಹಮ್ಮದ್ ಅವರು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಗೋಣಿಕೊಪ್ಪ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಮೂರ್ನಾಡುವಿನಲ್ಲಿ ಆರೋಗ್ಯ ಹಸ್ತ ಕಾರ್ಯಕ್ರದಲ್ಲಿ ಪಾಲ್ಗೊಂಡರು.
ಗೋಣಿಕೊಪ್ಪದಲ್ಲಿ ನಡೆದ ನಮ್ಮೂರ ಹೆಮ್ಮೆ ಕಾರ್ಯಕ್ರಮದಲ್ಲಿ ಹತ್ತನೇ ತರಗತಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಂಸನೀಯ ಪತ್ರ ಹಾಗೂ ನೆನಪಿನ ಕಾಣಿಕೆಯನ್ನು ವಿತರಿಸಿ ಪ್ರೋತ್ಸಾಹಿಸಿದರು.
ಕಾರ್ಯಕಾರಣಿ ಸಭೆಯಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಡೆಸಿದ ಹೋರಾಟಗಳ ಬಗ್ಗೆ ಮಾಹಿತಿ ಪಡೆದರು.
ಮುಂಬರಲಿರುವ ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಹಲವು ಸಲಹೆಗಳನ್ನು ನೀಡಿದರು. ಜಿಲ್ಲಾ ಕಾಂಗ್ರೆಸ್ ನ ಹೋರಾಟ, ಕಾರ್ಯಕ್ರಮಗಳು ಹಾಗೂ ಸಂಘಟನೆಯ ಬಗ್ಗೆ ಸಲೀಂ ಅಹಮ್ಮದ್ ತೃಪ್ತಿ ವ್ಯಕ್ತಪಡಿಸಿದರು.
ಇದೇ ಸಂದರ್ಭ ವಿಧಾನ ಪರಿಷತ್ ಮುಖ್ಯ ಸಚೇತಕ ಎಂ.ನಾರಾಯಣ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಮಂಜುಳಾ ರಾಜ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವೀಕ್ಷಕ ಟಿ.ಎಂ.ಶಾಹಿದ್, ಕೆಪಿಸಿಸಿಯ ಮಾಹಿತಿ ಹಕ್ಕು ಮತ್ತು ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ, ಹಿರಿಯರಾದ ಹೆಚ್.ಎಸ್.ಚಂದ್ರಮೌಳಿ, ಜಿಲ್ಲಾ ಕಾಂಗ್ರೆಸ್ ಖಜಾಂಚಿ ಹೆಚ್.ಎಂ.ನಂದಕುಮಾರ್, ಕೆಪಿಸಿಸಿ ಮಾಜಿ ಸದಸ್ಯ ಹರೀಶ್ ಬೋಪಣ್ಣ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ವಕ್ತಾರ ಟಿ.ಈ.ಸುರೇಶ್, ಪ್ರಮುಖರಾದ ಸದಾಮುದ್ದಪ್ಪ, ತೆನ್ನಿರಾ ಮೈನಾ, ಬೇಕಲ್ ರಮಾನಾಥ್, ಮುದ್ದುರಾಜು, ಅಲ್ಪಸಂಖ್ಯಾತ ಘಟಕದ ಮಡಿಕೇರಿ ಬ್ಲಾಕ್ ಅಧ್ಯಕ್ಷ ಕಲೀಲ್ ಭಾಷ, ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್, ಡಿಸಿಸಿ ಸದಸ್ಯರಾದ ಗೀತಾ ಧರ್ಮಪ್ಪ, ಸಯ್ಯದ್ ಭಾವ, ಕೆ.ಆರ್.ಚಂದ್ರ, ಆರ್.ಚಂದ್ರ ಶೇಖರ್, ಚುಮ್ಮಿದೇವಯ್ಯ, ಎಐಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ ಶುಭದಾಯಿನಿ ಮತ್ತಿತರರು ಹಾಜರಿದ್ದರು.