ಕೊಡ್ಲಿಪೇಟೆಯಲ್ಲಿ ಜೆಡಿಎಸ್ ಪೂರ್ವಭಾವಿ ಸಭೆ : ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಗಣೇಶ್ ಕರೆ

ಮಡಿಕೇರಿ ಸೆ. 15 : ಸೋಮವಾರಪೇಟೆ ತಾಲ್ಲೂಕು ಕೊಡ್ಲಿಪೇಟೆ ಹೋಬಳಿ ಜೆಡಿಎಸ್ ವತಿಯಿಂದ ಮುಂಬರುವ ಸ್ಥಳೀಯ ಚುನಾವಣೆ ಸಿದ್ಧತೆಯ ಪೂರ್ವಭಾವಿ ಸಭೆ ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳದ ಅಧ್ಯಕ್ಷ ಕೆ.ಎಂ.ಗಣೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ಗಣೇಶ್ ಅವರು ಜಿಲ್ಲೆಯಲ್ಲಿ ಜೆಡಿಎಸ್ ನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕೆಂದು ಕರೆ ನೀಡಿದರು.
ಸಭೆಯಲ್ಲಿ ಜಿ.ಪಂ ಸದಸ್ಯ ಪುಟ್ಟರಾಜು, ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಹಿರಿಯರಾದ ತಮ್ಮಯ್ಯ, ರಾಜ್ಯ ಹಿರಿಯ ಉಪಾಧ್ಯಕ್ಷ ಎಂ.ಎಂ.ಷರೀಫ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸಾಕ್ ಖಾನ್, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ವಿಜಯ, ಕ್ಷೇತ್ರ ಸಮಿತಿ ಅಧ್ಯಕ್ಷ ಕೋತೂರು ಸುರೇಶ್, ಜಿಲ್ಲಾ ಖಜಾಂಚಿ ಡೆನ್ನಿ ಬರೋಸ್, ಜಿಲ್ಲಾ ಯುವ ಜನತಾದಳದ ಪ್ರಧಾನ ಕಾರ್ಯದರ್ಶಿ ಜಾಶಿರ್, ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ಎಂ. ಎಸ್. ಸೈಫ್ ಅಲಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ, ಕಾರ್ಯದರ್ಶಿ ಸುನಿಲ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ನಾಗರಾಜ್, ಯುವ ಘಟಕದ ಅಧ್ಯಕ್ಷ ರವಿ ಹಾಗೂ ಸ್ಥಳೀಯ ಮುಖಂಡರುಗಳು ಹಾಜರಿದ್ದರು.