ಚೀನಾದೊಂದಿಗೆ ಶಾಂತಿ ಸೂತ್ರಕ್ಕೆ ಸಿದ್ಧ

16/09/2020

ನವದೆಹಲಿ ಸೆ.16 : ಪೂರ್ವ ಲಡಾಕ್ ನಲ್ಲಿನ ಗಡಿ ತಂಟೆ, ಭಾರತ-ಚೀನಾ ಸೇನಾ ಸಂಘರ್ಷಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಲೋಕಸಭೆಯಲ್ಲಿ ಮಾಹಿತಿ ನೀಡಿದರು.
ಪೂರ್ವ ಲಡಾಕ್ ನಲ್ಲಿ ಗಡಿಯ ಉದ್ದಕ್ಕೂ ನಡೆಯುತ್ತಿರುವ ಮಿಲಿಟರಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಸರ್ಕಾರದ ಮೊದಲ ಅಧಿಕೃತ ಹೇಳಿಕೆ ಇದಾಗಿದೆ.
ಲಡಾಕ್ ನಲ್ಲಿ ಚೀನಾ ಜೊತೆಗಿನ ಗಡಿ ನಿಲುವನ್ನು ಶಾಂತಿಯುತವಾಗಿ ಬಗೆಹರಿಸಲು ಭಾರತ ಬದ್ಧವಾಗಿದೆ, ಆದರೆ ನೆರೆಯ ರಾಷ್ಟ್ರದ ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸುವ ಯಾವುದೇ ಪ್ರಯತ್ನ ಸ್ವೀಕಾರಾರ್ಹವಲ್ಲ. ಪೀಪಲ್ಸ್ ಲಿಬರೇಶನ್ ಆರ್ಮಿ ಈ ಪ್ರದೇಶದಲ್ಲಿನ ಯಥಾಸ್ಥಿತಿಯನ್ನು ಬದಲಿಸುವ ಪ್ರಯತ್ನದಿಂದ ಜೂನ್ನಲ್ಲಿ ಉಂಟಾದ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ ಎಂದರು.
ಈ ತಿಂಗಳ ಆರಂಭದಲ್ಲಿ ಮಾಸ್ಕೋದಲ್ಲಿ ತಮ್ಮ ಚೀನಾದ ಸಹವರ್ತಿಯೊಂದಿಗೆ ನಡೆದ ಸಭೆಯಲ್ಲಿ ಭಾರತದ ಸಾರ್ವಭೌಮತ್ವದ ಬಗ್ಗೆ ಸ್ಪಷ್ಟಪಡಿಸಿದ್ದನ್ನು ಹಂಚಿಕೊಂಡಿದ್ದಾರೆ.