ಗಲ್ಲು ಶಿಕ್ಷೆಯನ್ನು ಪ್ರಶ್ನಿಸಲು ಕಾಲಾವಕಾಶ

September 16, 2020

ನವದೆಹಲಿ ಸೆ.16 : ಪಾಕಿಸ್ತಾನದಲ್ಲಿ ಗೂಢಚಾರಿಕೆ ನಡೆಸಿದ ಆರೋಪದ ಮೇರೆಗೆ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತದ ನೌಕಾಧಿಕಾರಿ ಕುಲಭೂಷಣ್ ಜಾಧವ್ ತಮ್ಮ ವಿರುದ್ಧದ ಶಿಕ್ಷೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲು ಮತ್ತೆ ನಾಲ್ಕು ತಿಂಗಳ ಕಾಲಾವಕಾಶ ನೀಡುವ ಸುಗ್ರೀವಾಜ್ಞೆಗೆ ಪಾಕಿಸ್ತಾನ ಸಂಸತ್ತು ಅನುಮೋದನೆ ನೀಡಿದೆ.
ಈ ಹಿಂದೆ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಮುಖಭಂಗಕ್ಕೀಡಾಗಿದ್ದ ಪಾಕಿಸ್ತಾನ ಕುಲಭೂಷಣ್ ಜಾಧವ್ ಗೆ ರಾಯಭಾರ ಕಚೇರಿಯ ಸಂಪರ್ಕ ವ್ಯವಸ್ಥೆ ಕಲ್ಪಿಸಬೇಕು ಮತ್ತು ತಮಗೆ ನೀಡಿರುವ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಬೇಕು ಎಂದು ಆದೇಶ ನೀಡಿತ್ತು. ಈ ಆದೇಶದ ಅನ್ವಯ ಪಾಕಿಸ್ತಾನ ಸಂಸತ್ ಇದೀಗ ಕುಲಭೂಷಣ್ ಜಾಧವ್ ಗೆ ಗಲ್ಲು ಶಿಕ್ಷೆ ಪ್ರಶ್ನಿಸುವ ಅರ್ಜಿ ಸಲ್ಲಿಕೆ ಮಾಡಲು 4 ತಿಂಗಳ ಕಾಲವಕಾಶ ನೀಡಿದೆ.