4 ಕೋಟಿ ಮೌಲ್ಯದ ಗಾಂಜಾ ವಶ

16/09/2020

ಚಿತ್ರದುರ್ಗ ಸೆ.16 : ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಠಾಣೆ ಪೊಲೀಸರು ಬರೋಬ್ಬರಿ ನಾಲ್ಕು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಸಿ ಗಾಂಜಾವನ್ನು ವಶಪಡಿಸಿಕೊಂಡು, ನಾಲ್ವರನ್ನು ಬಂಧಿಸಿದ್ದಾರೆ. ಡಿ.ಬಿ.ಮಂಜುನಾಥ್, ವೈ.ಜಂಬುನಾಥ್, ಡಿ.ವೈ.ಮಂಜುನಾಥ್, ಸುಮಂತ್ ಗೌಡ ಬಂಧಿತ ಆರೋಪಿಗಳಿದ್ದಾರೆ. ರಾಜ್ಯದಲ್ಲೇ ಅತಿ ದೊಡ್ಡ ಗಾಂಜಾ ಪ್ರಕರಣವನ್ನು ಬೇಧಿಸಿ ಚಿತ್ರದುರ್ಗ ಪೊಲೀಸರು ಸೈ ಎನಿಸಿಕೊಂಡಿದ್ದಾರೆ. ಆದರೆ ದೊಡ್ಡ ಅಕ್ರಮ ಬಯಲಾದ ಬೆನ್ನಲ್ಲೇ ಕೋಟೆನಾಡಿನ ಜನರು ಸಹ ಬಾರಿ ಆತಂಕಕ್ಕೀಡಾಗಿದ್ದಾರೆ.
ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು ಈ ಜಾಲ ಹೇಗೆ ಕಾರ್ಯನಿರ್ವಹಿಸುತ್ತಿತ್ತು. ಬೆಳದ ಗಾಂಜಾವನ್ನು ಹೇಗೆ, ಯಾರಿಗೆ ಮಾರಾಟ ಮಾಡುತ್ತಿದ್ದರು ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ದಂಧೆಯನ್ನು ಬೇರು ಸಮೇತ ಕಿತ್ತೆಸೆಯಲು ಕಾರ್ಯಾಚರಣೆ ನಡೆಸಿದ್ದಾರೆ.