ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ

16/09/2020

ನವದೆಹಲಿ ಸೆ.16 : ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದ ಬೆನ್ನಲ್ಲೇ ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 422 ರೂ. ದಾಖಲೆಯ ಏರಿಕೆಯಾಗುವ ಮೂಲಕ 10 ಗ್ರಾಂ ಚಿನ್ನದ ಬೆಲೆ 53,019 ರೂಪಾಯಿಗೆ ಏರಿಕೆಯಾಗಿದೆ.
ಇನ್ನು ಚಿನ್ನದ ಜೊತೆ ಬೆಳ್ಳಿ ಬೆಲೆಯೂ ಏರಿಕೆಯಾಗಿದ್ದು, ಪ್ರತಿ ಕೆಜಿಗೆ 1,013 ರೂಪಾಯಿ ಹೆಚ್ಚಾಗಿ 70,743 ರೂಪಾಯಿಗೆ ತಲುಪಿದೆ.
ಅಂತಾರಾಷ್ಟ್ರೀಯ ಚಿನ್ನದ ಬೆಲೆಗಳು ಏರಿಕೆಯಾಗಿದ್ದು, ರೂಪಾಯಿ ಮೌಲ್ಯ ಮತ್ತೆ ಕುಸಿತಗೊಂಡಿದೆ ಎಂದು ಎಚ್‍ಡಿಎಫ್‍ಸಿ ಸೆಕ್ಯುರಿಟೀಸ್ ಹಿರಿಯ ವಿಶ್ಲೇಷಕ ತಪನ್ ಪಟೇಲ್ ಹೇಳಿದ್ದಾರೆ.
ಒಟ್ಟಾರೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ – ಇಳಿಕೆಯ ಹಾವು ಏಣಿ ಆಟ ಇದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.