ಸೆ.20 ರಂದು ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ

September 16, 2020

ಮಡಿಕೇರಿ ಸೆ.15 : ಪ್ರಸಕ್ತ(2020) ಸಾಲಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ನಾಗರಿಕ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ (ಪುರುಷ ಮತ್ತು ಮಹಿಳೆ) ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯು ಸೆಪ್ಟೆಂಬರ್, 20 ರಂದು ಮಡಿಕೇರಿ ಮತ್ತು ಕುಶಾಲನಗರದ ವಿವಿಧ ಶಾಲೆ, ಕಾಲೇಜುಗಳಲ್ಲಿ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರ, ಹಾಜರಾತಿ ಪತ್ರವನ್ನು ಪೊಲೀಸ್ ಅಂತರ್‍ಜಾಲ www.ksp.gov.in ಪಡೆದು ಅದರಲ್ಲಿ ನಿಗದಿ ಪಡಿಸಿರುವ ಭಾವಚಿತ್ರವಿರುವ ದಾಖಲಾತಿಯೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ಜಿಲ್ಲಾ ಪೊಲೀಸ್ ನೇಮಕಾತಿ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ತಿಳಿಸಿದ್ದಾರೆ.

error: Content is protected !!