ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮ ದಿನ : ಜಿಲ್ಲಾ ಬಿಜೆಪಿಯಿಂದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

16/09/2020

ಮಡಿಕೇರಿ ಸೆ. 16 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯ ಶ್ರೀಆಂಜನೇಯ ದೇವಸ್ಥಾನದ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನೀಲ್ ಸುಬ್ರಹ್ಮಣಿ ಅವರು ವೃಕ್ಷಾರೋಹಣ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ವಕ್ತಾರ ಮಹೇಶ್ ಜೈನಿ, ಉಪಾಧ್ಯಕ್ಷ ಅರುಣ್ ಕುಮಾರ್, ನಗರಾಧ್ಯಕ್ಷ ಮನು ಮಂಜುನಾಥ್ ಈ ಸಂದರ್ಭ ಹಾಜರಿದ್ದರು.