ವಸತಿ ಮತ್ತು ಹಕ್ಕು ಪತ್ರ ವಿತರಣೆಗೆ ಒತ್ತಾಯ

September 16, 2020

ಮಡಿಕೇರಿ ಸೆ.16 : ಕೊಡಗು ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿರುವ ವಸತಿ ರಹಿತ ಕಡು ಬಡವರು ಹಾಗೂ ಕಾರ್ಮಿಕ ವರ್ಗಕ್ಕೆ ವಸತಿ ಯೋಜನೆಯ ಮೂಲಕ ಮನೆಗಳನ್ನು ನೀಡಬೇಕು, ನಿವೇಶನದ ಹಕ್ಕುಪತ್ರ ಹಂಚಿಕೆ ಮಾಡಬೇಕು ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಂತೆ ಕೊಡಗು ಜಿಲ್ಲಾ ಪ್ರಜಾ ಪರಿವರ್ತನ ವೇದಿಕೆ ಒತ್ತಾಯಿಸಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ವೇದಿಕೆಯ ಜಿಲ್ಲಾಧ್ಯಕ್ಷ ಹೆಚ್.ಕೆ.ಮುತ್ತಪ್ಪ ಅವರು, ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಸೆ.18 ರಂದು ನಗರದ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಲಾಗುವುದೆಂದು ತಿಳಿಸಿದ್ದಾರೆ.
ವಸತಿ ರಹಿತರು ಹಾಗೂ ವೇದಿಕೆಯ ಪ್ರಮುಖರು ಈ ಸಂದರ್ಭ ಹಾಜರಿರುವರು ಎಂದು ಅವರು ಹೇಳಿದ್ದಾರೆ.

error: Content is protected !!