ಸೆ.21 ರಿಂದ 28 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ

ಮಡಿಕೇರಿ ಸೆ.16 : ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯು ಸೆಪ್ಟೆಂಬರ್, 21 ರಿಂದ 28 ರವರೆಗೆ ಕೊಡಗು ಜಿಲ್ಲೆಯ ಒಟ್ಟು ಐದು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಪಿ.ಎಸ್.ಮಚ್ಚಾಡೊ ಅವರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ 5 ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸ್, ಸಾಮಾಜಿಕ ಅಂತರ ಕಾಯ್ದುಕೊಂಡಂತೆ ಆಸನ ವ್ಯವಸ್ಥೆಯನ್ನು ಮತ್ತು ಪರೀಕ್ಷೆ ನಡೆಸಲು ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆ ಬರೆಯಲು ಆಗಮಿಸುವ ಎಲ್ಲಾ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ಪರೀಕ್ಷೆ ನಡೆಸಿ, ಪರೀಕ್ಷಾ ದಿನಗಳಂದು ಬೆಳಗ್ಗೆ 8.30 ಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶ ನೀಡಲಾಗುವುದು.
ಪರೀಕ್ಷೆ ಬರೆಯಲಿರುವ ಅಭ್ಯರ್ಥಿಯು ಕೋವಿಡ್-19 ಸೋಂಕಿತರಾಗಿದ್ದರೆ ಅಥವಾ ಸೋಂಕಿತರ ಪ್ರಥಮ ಸಂಪರ್ಕದಲ್ಲಿದ್ದರೂ ಸಹ ಇವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಇಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ತಕ್ಷಣವೇ, ತಮ್ಮ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹಾಗೂ ತಮ್ಮ ತಾಲ್ಲೂಕಿನ ಬಿಇಒ ಕಚೇರಿ ಸಂಪರ್ಕಿಸಿ, ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಡಿಡಿಪಿಐ ಕಚೇರಿ 08272-228337, ಬಿಇಒ, ಮಡಿಕೇರಿ ದೂ.ಸಂ. 9480695260/ 08272-225664, ಬಿಇಒ. ಸೋಮವಾರಪೇಟೆ 9480695261/ 08276-282162 ಹಾಗೂ ಬಿಇಒ. ವಿರಾಜಪೇಟೆ 9480695262/ 08274-257249 ನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೋ ಅವರು ಕೋರಿದ್ದಾರೆ.
