ವಿವಿಧ ಯೋಜನೆಗೆ ಅರ್ಜಿ ಆಹ್ವಾನ

September 16, 2020

ಮಡಿಕೇರಿ ಸೆ.16 : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಹಾಗೂ ಪೌರಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಉದ್ಯಮಶೀಲತಾ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಐರಾವತ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದ್ದು, ಈ ಯೋಜನೆ ಅನುಷ್ಠಾನ ಮಾಡಲು 2019-20ನೇ ಸಾಲಿಗೆ ಅರ್ಹರಿಂದ ಆನ್‍ಲೈನ್ ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಆನ್‍ಲೈನ್ www.ksskdc.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, (ಸಫಾಯಿ ಕರ್ಮಚಾರಿಗಳು ಮತ್ತು ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳು). ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ಕೊನೇ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ (ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮ), ಹೊಸ ಬಡಾವಣೆ, ರೇಸ್ ಕೋರ್ಸ್ ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಮತ್ತು ದೂ.ಸಂ 08272-228857 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.