ಶಿಕ್ಷಕಿ ಕುಂತಿ ಬೋಪಯ್ಯ ಗೆ ಸನ್ಮಾನ

16/09/2020

ಮಡಿಕೇರಿ ಸೆ.16 : ಸೋಮವಾರಪೇಟೆ ತಾಲ್ಲೂಕು ಕೂಡಿಗೆ ಕ್ರೀಡಾಶಾಲೆಯ ಮುಖ್ಯ ಶಿಕ್ಷಕರಾದ ಕುಂತಿ ಬೋಪಯ್ಯ ಅವರು 2020-21 ನೇ ಸಾಲಿನ ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದು, ಸೆಪ್ಟೆಂಬರ್, 05 ರಂದು ಸಂತ ಮೈಕಲರ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದಿರುವ ಹಿನ್ನೆಲೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೊ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಗಾಯತ್ರಿ ಹಾಗೂ ಕಚೇರಿಯ ಅಧಿಕಾರಿ ವೃಂದದವರಿಂದ ಬುಧವಾರ(ಸೆ.16) ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ರವಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್, ಶಿಕ್ಷಕರಾದ ರೇವತಿ ರಮೇಶ್, ಇತರರು ಇದ್ದರು.