ತೆಕ್ಕಿಲ್ ಪ್ರತಿಷ್ಠಾನದಿಂದ ವಿಧಾನ ಪರಿಷತ್‍ನ ಮುಖ್ಯ ಸಚೇತಕ ನಾರಾಯಣ ಸ್ವಾಮಿ ಗೆ ಸನ್ಮಾನ

September 16, 2020

ಮಡಿಕೇರಿ ಸೆ. 16 : ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ದಿ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ಸರಕಾರ ವಿರೋಧ ಪಕ್ಷದ ವಿಧಾನ ಪರಿಷತ್ ನ ಮುಖ್ಯ ಸಚೇತಕರಾದ ಎಂ.ನಾರಾಯಣ ಸ್ವಾಮಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ನಾರಾಯಣ ಸ್ವಾಮಿಯವರು ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ, ವಿಧಾನ ಪರಿಷತ್ ಸದಸ್ಯರಾಗಿ, ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಅರಂತೋಡಿನಲ್ಲಿ ನಡೆದ ಸಮಾರಂಭದಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಾಹೀದ್ ತೆಕ್ಕಿಲ್ ಸನ್ಮಾನಿಸಿದರು.
ಈ ಸಂದರ್ಭ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕೆ.ಆರ್.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಅರಂತೋಡು ಗ್ರಾ. ಪಂ. ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ವಾಸು ಕಟ್ಟೆಮನೆ, ತೆಕ್ಕಿಲ್ ಪ್ರತಿಷ್ಥಾನದ ಕೋಶಾಧಿಕಾರಿ ಟಿ.ಎಂ.ಜಾವೇದ್, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಟಿ.ಎಂ.ಶಾಝ್ ತೆಕ್ಕಿಲ್ ಸೇರಿದಂತೆ ಮತ್ತಿತರರು ಇದ್ದರು.

error: Content is protected !!