ಸೆ. 18 ರಂದು ವಿಷ್ಣು ಸೇನಾ ಸಮಿತಿಯಿಂದ ಡಾ. ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಣೆ

September 17, 2020

ಮಡಿಕೇರಿ ಸೆ. 16 : ಕೊಡಗು ಜಿಲ್ಲಾ ವಿಷ್ಣು ಸೇನಾ ಸಮಿತಿ ವತಿಯಿಂದ ಸೆ. 18 ರಂದು ಡಾ. ವಿಷ್ಣುವರ್ಧನ್ ಅವರ 70ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಗುವುದೆಂದು ಸಮಿತಿಯ ಜಿಲ್ಲಾಧ್ಯಕ್ಷ ರಫೀಕ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಸಂಜೆ 6.30ಕ್ಕೆ ನಗರದ ದಾಸವಾಳ ರಸ್ತೆಯ ಬಸಪ್ಪ ಶಿಶು ವಿಹಾರ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಗರಸಭೆಯ ಪೌರಯುಕ್ತರಾದ ಎಸ್.ವಿ. ರಾಮ್‍ದಾಸ್ ಪಾಲ್ಗೊಳ್ಳಲಿದ್ದಾರೆ ಎಂದರು.
ಕಾರ್ಯಕ್ರಮಕ್ಕೆ ವಿಷ್ಣು ಅಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ರಫೀಕ್ ಮನವಿ ಮಾಡಿದರು.

error: Content is protected !!