ಅಧಿವೇಶನ ಮುಗಿದ ಮೇಲೆ ಸಂಪುಟ ವಿಸ್ತರಣೆ

September 17, 2020

ಯಾದಗಿರಿ ಸೆ.17 : ವಿಧಾನಸಭೆ ಅಧಿವೇಶನ ಮುಗಿದ ಮೇಲೆ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ದೆಹಲಿಗೆ ತೆರಳುತ್ತಿರುವುದು ಪೂರ್ವ ನಿಗದಿತ ಕಾರ್ಯಕ್ರಮ ಹಾಗೂ ಅತಿವೃಷ್ಟಿ ಪರಿಹಾರ ಪಡೆಯುವ ಬಗ್ಗೆ ಚೆರ್ಚಿಸಲು. ಈ ನಡುವೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಾಚನೆ ಬಗ್ಗೆ ಹೈಕಮಾಂಡ್ ಜೊತೆ ಚೆರ್ಚೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನೆರೆ ಪರಿಹಾರಕ್ಕಾಗಿ ಸಿಎಂ ನಾಳೆ ದೆಹಲಿಗೆ ಹೋಗಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಭೇಟಿಗೆ ಸಮಯ ಕೇಳಿದ್ದಾರೆ. ಸದ್ಯ ಎರಡನೇ ಕಂತಿನಲ್ಲಿ 395 ಕೋಟಿ ಕೊಟ್ಟಿದ್ದು ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಿದ್ದಾರೆ ಎಂದರು.

error: Content is protected !!