ತಜ್ಞರ ಸಮಿತಿಯಲ್ಲಿ ದಕ್ಷಿಣಕ್ಕೆ ಅನ್ಯಾಯ

September 17, 2020

ಬೆಂಗಳೂರು ಸೆ.16 : ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ.
ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾದುವೆ, ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ, ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ ಎಂದು ಕಿಡಿಕಾರಿದ್ದಾರೆ.