ನರೇಂದ್ರ ಮೋದಿ ಜನ್ಮದಿನಾಚರಣೆ : ನಗರ ಬಿಜೆಪಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
17/09/2020

ಮಡಿಕೇರಿ ಸೆ. 17 : ಮಡಿಕೇರಿ ನಗರ ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ಹಂಪಲು ವಿತರಿಸಲಾಯಿತು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ನಗರ ಅಧ್ಯಕ್ಷ ಮನು ಮಂಜುನಾಥ್, ಜಿಲ್ಲಾ ವಕ್ತರಾ ಮಹೇಶ್ ಜೈನಿ, ಜಿಲ್ಲಾ ಉಪಧ್ಯಕ್ಷ ಬಿ. ಕೆ. ಅರುಣ್ ಕುಮಾರ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಸುಬ್ರಮಣಿ, ಕೆ. ಎಂ. ಅಪ್ಪಣ್ಣ, ಮಹಿಳಾ ಮೋರ್ಚಾದ ಅಧ್ಯಕ್ಷೆ ಸವಿತಾ ರಾಕೇಶ್, ಪ್ರಮುಖರಾದ ಅನಿತಾ ಪೂವಯ್ಯ, ಕನ್ನಿಕೆ, ಪ್ರೇಮ ರಾಘವಯ್ಯ, ಜೀವನ್, ಕೆ. ಎಸ್. ರಮೇಶ್, ಜಗದೀಶ್ ದಿಶು, ಸುಬ್ರಮಣಿ, ಯುವ ಮೋರ್ಚಾ ಅಧ್ಯಕ್ಷ ನವೀನ್ ಪೂಜಾರಿ ಹಾಜರಿದ್ದರು.


