ಸೇವಾ ಸಪ್ತಾಹ : ಸೋಮವಾರಪೇಟೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

17/09/2020

ಸೋಮವಾರಪೇಟೆ ಸೆ.17 : ಬಿಜೆಪಿಯಿಂದ ನಡೆಯುತ್ತಿರುವ ಸೇವಾ ಸಪ್ತಾಹದ ಪ್ರಯುಕ್ತ ಸೋಮವಾರಪೇಟೆಯ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆಯ ಮೇರೆಗೆ ಒಂದು ವಾರಗಳ ಕಾಲ ಸೇವಾ ಸಪ್ತಾಹ ಆಚರಿಸಲಾಗುತ್ತಿದೆ. ಪ್ರತಿ ದಿನ ಬಿಜೆಪಿ ಕಾರ್ಯಕರ್ತರು ಸೇವಾ ಕಾರ್ಯಗಳನ್ನು ಕೈಗೊಳ್ಳಲಿದ್ದಾರೆ ಎಂದರು.
ಈ ಸಂದರ್ಭ ಬಿಜೆಪಿ ತಾಲೂಕು ಅಧ್ಯಕ್ಷ ಮನುಕುಮಾರ್ ರೈ, ಜಿ.ಪಂ. ಸದಸ್ಯ ಬಿ.ಜೆ. ದೀಪಕ್, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಸಪ್ತಾಹದ ಸಂಚಾಲಕ ವೈಶಾಕ್, ಪ್ರಮುಖರಾದ ಕೆ.ಜಿ. ಮನು, ಕೃಷ್ಣಪ್ಪ, ಉಷಾ ತೇಜಸ್ವಿ, ಪಿ.ಕೆ.ಚಂದ್ರು, ಬಿ.ಆರ್.ಮಹೇಶ್, ಆಸ್ಪತ್ರೆಯ ವೈದ್ಯಾಧಿಕಾರಿ ಶಿವಪ್ರಸಾದ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.