ಮಾಂದಲ್ ಪಟ್ಟಿಗೆ ಎಂಎಲ್‍ಸಿ ವೀಣಾಅಚ್ಚಯ್ಯ ಭೇಟಿ : ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ

17/09/2020

ಮಡಿಕೇರಿ ಸೆ. 17 : ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಮಡಿಕೇರಿ ತಾಲೂಕಿನ ಮಾಂದಲಪಟ್ಟಿಗೆ ತೆರಳಿ ಅಲ್ಲಿನ ಸ್ಥಳೀಯರ ಕುಂದು ಕೊರತೆಯನ್ನು ಆಲಿಸಿದರು.

ಸ್ಥಳೀಯರು ತಮ್ಮ ಗ್ರಾಮದಲ್ಲಿನ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ಸದಸ್ಯರ ಗಮನ ಸೆಳೆದು, ಸಮಸ್ಯೆಗಳನ್ನು ಶೀಘ್ರದಲ್ಲಿಯೇ ಬಗೆಹರಿಸುವಂತೆ ಮನವಿ ಮಾಡಿಕೊಂಡರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ವೀಣಾ ಅಚ್ಚಯ್ಯ ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಚರ್ಚಿಸಿ ಗ್ರಾಮದಲ್ಲಿನ ಸಮಸ್ಯೆಗಳ ಬಗ್ಗೆ ಶೀಘ್ರವಾಗಿ ಗಮನ ಹರಿಸಬೇಕು ಹಾಗೂ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕಿಸಿ ಎಂದು ಸೂಚನೆ ನೀಡಿದರು. ಅಧಿಕಾರಿಗಳು ಕೂಡ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದರು.

ಭೇಟಿ ಸಂದರ್ಭ ಸ್ಥಳೀಯ ಪ್ರಮುಖರಾದ ಹಂಚೇಟ್ಟಿರ ಮನು ಮುದ್ದಪ್ಪ, ತಾಲೂಕು ಪಂಚಾಯಿತಿ ಸದಸ್ಯ ಮುದ್ದಂಡ ರಾಯ್, ಕಾಳಚಂಡ ಪವನ್ ಹಾಗೂ ವಿಶಾಲ್ ಕಾರ್ಯಪ್ಪ, ವಿಕಾಶ್ ಅಚ್ಚಯ್ಯ ಸೇರಿದಂತೆ ಸ್ಥಳೀಯ ಪ್ರಮುಖರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.