ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ ನಿಧನ

17/09/2020

ಮಡಿಕೇರಿ ಸೆ.17 : ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಎಸ್.ಎನ್.ನರಸಿಂಹಮೂರ್ತಿ (73) ಅವರು ಗುರುವಾರ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.
ಎಸ್.ಎನ್.ನರಸಿಂಹಮೂರ್ತಿ ಕೊಡಗು ಜಿಲ್ಲಾ ಪರಿಷತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದ ನಗರಾಧ್ಯಕ್ಷರಾಗಿ ಹಲವು ಹಂತಗಳಲ್ಲಿ ಕೆಲಸ ನಿರ್ವಹಿಸಿದ ನರಸಿಂಹಮೂರ್ತಿ ಅವರು ಕುಶಾಲನಗರ ಕುಡಾ ಅಧ್ಯಕ್ಷರಾಗಿ, ಕೆಪಿಸಿಸಿ ಸದಸ್ಯರಾಗಿ, ಆರ್ಯವೈಶ್ಯ ಮಹಾಸಭಾದ ನಿರ್ದೇಶಕರಾಗಿ ವಿವಿಧ ಸಂಘಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.