ದೋಷಮುಕ್ತಗೊಳಿಸಲು ಅನ್ಸಾರಿ ಮನವಿ

September 18, 2020

ಅಯೋಧ್ಯೆ ಸೆ.18 : ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಘೋಷಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ, ಜಮೀನು ವಿವಾದದಲ್ಲಿ ಮುಸ್ಲಿಂ ಕಡೆಯಿಂದ ಪ್ರಮುಖ ಕಕ್ಷಿದಾರರಾದ ಇಸ್ಬಾಲ್ ಅನ್ಸಾರಿ ಗುರುವಾರ ಎಲ್ಲ ಆರೋಪಿಗಳನ್ನು ದೋಷಮುಕ್ತಗೊಳಿಸುವಂತೆ ಮನವಿ ಮಾಡುವುದರ ಮೂಲಕ ಎಲ್ಲರನ್ನೂ ಚಕಿತಗೊಳಿಸಿದ್ದಾರೆ.
ವಿಶೇಷ ಸಿಬಿಐ ನ್ಯಾಯಾಲಯ ಸೆ. 30ರಂದು ತನ್ನ ತೀರ್ಪು ನೀಡುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ, ಮಾಜಿ ಕೇಂದ್ರ ಸಚಿವ ಡಾ. ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಮತ್ತು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಸೇರಿದಂತೆ ಎಲ್ಲಾ 32 ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ.
`ರಾಮಮಂದಿರ ನಿರ್ಮಾಣಕ್ಕಾಗಿ ಸುಪ್ರೀಂಕೋರ್ಟ್ ಇಡೀ ಜಮೀನು ನೀಡಿದೆ. ಅನೇಕ ಆರೋಪಿಗಳು ಈಗಾಗಲೇ ಸಾವನ್ನಪ್ಪಿದ್ದಾರೆ. ಹೆಚ್ಚಿನ ಆರೋಪಿಗಳು ವೃದ್ಧಾಪ್ಯದಲ್ಲಿರುವುದರಿಂದ ಅವರಿಗೆ ಈ ಸಮಯದಲ್ಲಿ ಶಿಕ್ಷೆ ವಿಧಿಸುವುದು ಸೂಕ್ತವಲ್ಲ ಸರಿಯಲ್ಲ ಎಂದು ಇಕ್ಬಾಲ್‍ಅನ್ಸಾರಿ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

error: Content is protected !!