ರಾಷ್ಟ್ರಪತಿಗಳನ್ನು ಭೇಟಿಯಾದ ಪ್ರತಿಪಕ್ಷ

18/09/2020

ನವದೆಹಲಿ ಸೆ.18 : ಪ್ರತಿಪಕ್ಷಗಳ ನಾಯಕರು ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ, ಕಳೆದ ಫೆಬ್ರವರಿಯಲ್ಲಿ ರಾಷ್ಟ್ರರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಪೊಲೀಸರ ಪಾತ್ರದ ಬಗ್ಗೆ ತನಿಖೆ ನಡೆಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.
ಈ ಸಂಬಂಧ ರಾಷ್ಟ್ರಪತಿಗಳಿಗೆ ಸಲ್ಲಿಸಿದ ಜಂಟಿ ಮನವಿಯಲ್ಲಿ, ಗಲಭೆಗಳ ಕುರಿತು ದೆಹಲಿ ಪೊಲೀಸರು ನಡೆಸುತ್ತಿರುವ ತನಿಖೆಯ ಬಗ್ಗೆ ಪ್ರತಿಪಕ್ಷಗಳ ಮುಖಂಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಹಿಂಸಾಚಾರದ ಸಂದರ್ಭದಲ್ಲಿ ದೆಹಲಿ ಪೊಲೀಸರು ವಹಿಸಿದ ಪಾತ್ರದ ಬಗ್ಗೆ ತನಿಖೆಯಾಗಬೇಕು ಮತ್ತು ಸಿಎಎ / ಎನ್‍ಆರ್‍ಸಿ / ಎನ್ ಪಿಆರ್ ವಿರೋಧಿ ಚಳುವಳಿಗಳಲ್ಲಿ ಭಾಗವಹಿಸಿದ ಕಾರ್ಯಕರ್ತರು ಹಾಗೂ ಯುವಕರಿಗೆ ಪೊಲೀಸರು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ ಮತ್ತು ಅವರ ವಿರುದ್ಧ ಸುಳ್ಳು ಕೇಸ್ ಗಳನ್ನು ದಾಖಲಿಸುತ್ತಿದ್ದಾರೆ ಎಂದು ದೂರಿದ್ದಾರೆ.