ಡ್ರಗ್ಸ್ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ

September 18, 2020

ಬೆಂಗಳೂರು ಸೆ.18 : ಡ್ರಗ್ಸ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದು ಸೂಕ್ತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕುಮಾರಕೃಪಾದಲ್ಲಿಂದು ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದ ಅವರು, ಡ್ರಗ್ಸ್ ಹಗರಣದಲ್ಲಿ ಪೊಲೀಸರು ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದು, ಪ್ರಮುಖ ಆರೋಪಿಗಳನ್ನು ಬಂಧಿಸಿದಂತೆ ಸರ್ಕಾರ ಒತ್ತಡ ಹೇರುತ್ತಿದೆ. ಆದ್ದರಿಂದ ಇಡೀ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದು ಸೂಕ್ತ ಎಂದು ತಿಳಿಸಿದ್ದಾರೆ.
‘ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳ ಬಂಧನ ಆಗಿಲ್ಲ. ಈ ಕುರಿತಾಗಿ ಪೊಲೀಸರಲ್ಲಿ ವಿಚಾರಿಸಿದ್ದೇನೆ. ಕೆಲವರನ್ನು ಆರೆಸ್ಟ್ ಮಾಡಿಲ್ಲ ಯಾಕೆ ಎಂದು ಕೇಳಿದೆ. ಅವರು ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಿದರು. ಇದನ್ನೆಲ್ಲಾ ಗಮನಿಸಿದರೆ ಪೊಲೀಸರ ಮೇಲೆ ಸರ್ಕಾರ ಒತ್ತಡನೂ ಇರಬಹುದು. ಇಲ್ಲ ಎಂದು ಹೇಳುವುದಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದರು.

error: Content is protected !!