ರಾಜ್ಯದ ಅಭಿವೃದ್ಧಿಗೆ ಹೊಸ ಆಯಾಮ

18/09/2020

ಕಲಬುರಗಿ ಸೆ.18 : ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಆಯಾಮ ನೀಡುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಲ್ಲಿ ಒಂದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಿಂದಿನಂತೆಯೇ ಈ ಭಾರಿಯೂ ಬಾರೀ ಭರವಸೆಗಳನ್ನು ನೀಡಿದ್ದಾರೆ.
ಹೈದರಾಬಾದ್ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಗುರುವಾರ ಕಲಬುರಗಿಯ ಪೊಲೀಸ್ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ, ಪ್ರಾದೇಶಿಕ ಅಸಮತೋಲನ ನಿವಾರಣೆ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಸ್ಥಾಪಿಸಲಾಗಿದೆ ಎಂದರು.
ಮಾನವ ಸಂಪನ್ಮೂಲ, ಕೃಷಿ, ಸಾಂಸ್ಕೃತಿಕ ಸಂಘವು ನಿಗದಿತ ಗುರಿ ಮುಟ್ಟಿಸಲು ಯಶಸ್ವಿಯಾಗುತ್ತದೆ. ಅದಕ್ಕೆ ಸರ್ಕಾರದ ಸಂಪೂರ್ಣ ಸಹಕಾರವಿದೆ. ಕಲ್ಯಾಣ ಕರ್ನಾಟಕದ ಉತ್ಸವದ ಮಂಗಳ ಘಳಿಗೆಯಲ್ಲಿ ಈ ಭಾಗದ ಅಭಿವೃದ್ದಿಯ ಹೊಸ ಶೆಕೆಗೆ ನಾಂದಿ ಹಾಡಲು ನನಗೆ ಸಂತೋಷವಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.