ಸೋಮವಾರಪೇಟೆಯಲ್ಲಿ ಅಕ್ರಮ ಜಾನುವಾರು ಸಾಗಾಟ : ಪ್ರಕರಣ ದಾಖಲು
18/09/2020

ಸೋಮವಾರಪೇಟೆ : ದೊಡ್ಡತೋಳೂರು ಗ್ರಾಮದಿಂದ ಕೊಣನೂರಿಗೆ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟಗೊಳಿಸುತ್ತಿದ್ದ ಸಂದರ್ಭ ಪೊಲೀಸರು ಕಾರ್ಯಾಚರಣೆ ನಡೆಸಿ ವಾಹನ ವಶಪಡಿಸಿಕೊಂಡು ಜಾನುವಾರುಗಳನ್ನು ರಕ್ಷಿಸಿದ್ದು, ಈರ್ವರು ಆರೋಪಿಗಳು ಪರಾರಿಯಾಗಿದ್ದಾರೆ.
ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಅಕ್ರಮವಾಗಿ 8 ಜಾನುವಾರುಗಳನ್ನು ಸಾಗಾಟಗೊಳಿಸುತ್ತಿದ್ದ ಸಂದರ್ಭ ಕಾರ್ಯಾಚರಣೆ ನಡೆಸಿದ್ದು, ಜಾನುವಾರುಗಳನ್ನು ಭಾಗಮಂಡಲದ ಗೋಶಾಲೆಗೆ ಸಾಗಿಸಲಾಗಿದೆ.
ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿ ಶಿವಶಂಕರ್, ಸಿಬ್ಬಂದಿಗಳಾದ ಶಶಿಧರ್, ನವೀನ್, ಜಗದೀಶ್ ಅವರುಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
