ವಿರಾಜಪೇಟೆ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾಗಿ ಸೆ.20 ರಂದು ಪಿ.ಎ.ಮಂಜುನಾಥ್ ಪದಗ್ರಹಣ

18/09/2020

ಮಡಿಕೇರಿ ಸೆ.18 : ಜಾತ್ಯತೀತ ಜನತಾದಳದ ವಿರಾಜಪೇಟೆ ತಾಲ್ಲೂಕಿನ ನೂತನ ಅಧ್ಯಕ್ಷ ಪಿ.ಎ.ಮಂಜುನಾಥ್ ಅವರ ಪದಗ್ರಹಣ ಕಾರ್ಯಕ್ರಮ ಸೆ.20 ರಂದು ನಡೆಯಲಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹೆಚ್.ಮತೀನ್ ತಿಳಿಸಿದ್ದಾರೆ.
ಅಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆಯ ಪುರಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭ ಚುನಾವಣೆಯ ಪೂರ್ವಭಾವಿ ಸಿದ್ಧತೆ ಬಗ್ಗೆ ಸಭೆ ನಡೆಯಲಿದ್ದು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.