ಪ್ರಧಾನಿಯನ್ನು ಭೇಟಿಯಾದ ಸಿಎಂ ಬಿಎಸ್‍ವೈ

19/09/2020

ಬೆಂಗಳೂರು ಸೆ.19 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರಮೋದಿಯವರನ್ನು ಭೇಟಿಯಾದರು.
ಪಾರ್ಲಿಮೆಂಟ್ ಹೌಸ್ ನಲ್ಲಿ 15 ನಿಮಿಷಗಳ ಭೇಟಿಯ ಅಂತ್ಯದಲ್ಲಿ ನವೆಂಬರ್ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಟೆಕ್ ಶೃಂಗಸಭೆಯ ವರ್ಚುಯಲ್ ಉದ್ಘಾಟನೆಗೆ ಆಹ್ವಾನಿಸಿದರು.
ನಾನಾ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಧರ್ಮೇಂದ್ರ ಪ್ರಧಾನ್ ಅವರನ್ನು ಯಡಿಯೂರಪ್ಪ ಭೇಟಿಯಾದರು.ಇಂದು ಸಂಜೆ ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಯಡಿಯೂರಪ್ಪ ಭೇಟಿಯಾಗುವ ನಿರೀಕ್ಷೆಯಿದೆ.
ಕೋವಿಡ್-19 ನಿರ್ಬಂಧದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಗಳ ಭೇಟಿ ವೇಳೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಮಾತ್ರ ಯಡಿಯೂರಪ್ಪ ಅವರ ಜೊತೆಯಲ್ಲಿದ್ದರು.