ತೆಂಗು ಸಂಸ್ಕರಣಾ ಘಟಕ ಲೋಕಾರ್ಪಣೆ

19/09/2020

ಚಾಮರಾಜನಗರ ಸೆ.19 : ಸಹಕಾರ ಸಂಘ ಸ್ಥಾಪಿಸಿರುವ ರಾಜ್ಯದ ಮೊದಲ ತೆಂಗು ಸಂಸ್ಕರಣಾ ಘಟಕ ಶುಕ್ರವಾರ ಚಾಮರಾಜನಗರ ತಾಲೂಕಿನ ಮುನಚನಹಳ್ಳಿಯಲ್ಲಿ ಲೋಕಾರ್ಪಣೆಗೊಂಡಿತು.
ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ವಿದ್ಯುಕ್ತವಾಗಿ ಅತ್ಯಾಧುನಿಕ ತೆಂಗು ಸಂಸ್ಕರಣಾ ಘಟಕ ಉದ್ಘಾಟಿಸಿ ಸಂತಸ ವ್ಯಕ್ತಪಡಿಸಿದರು.

ತೆಂಗು ಸಂಸ್ಕರಣಾ ಘಟಕವನ್ನು ಚಾಮರಾಜನಗರ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣಾ ಮತ್ತು ಮಾರಾಟ ಸಹಕಾರ ಸಂಘವು ಇದನ್ನು ಸ್ಥಾಪಿಸಿದ್ದು, ರಾಜ್ಯ ಸರ್ಕಾರವೂ ನೆರವು ನೀಡಿದೆ.
2018ರ ವರ್ಷಾರಂಭದಲ್ಲೇ ಉದ್ಘಾಟನೆಗೆ ಸಿದ್ಧವಾಗಿತ್ತು. ಪ್ರಾಯೋಗಿಕವಾಗಿ ಕಾರ್ಯವನ್ನೂ ನಿರ್ವಹಿಸಿದೆ. ಹಿಂದಿನ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಹೆಚ್.ಡಿ.ಕುಮಾರಸ್ವಾಮಿ ಬಾರದೇ ಇದ್ದುದರಿಂದ ಉದ್ಘಾಟನೆ ಸಾಧ್ಯವಾಗಿರಲಿಲ್ಲ. ಕನಿಷ್ಠ 50 ಸಾವಿರ ತೆಂಗಿನ ಕಾಯಿಗಳನ್ನು ಸಂಸ್ಕರಿಸಿ ಪುಡಿ ಮಾಡುವ ಸಾಮಥ್ರ್ಯವನ್ನು ಈ ಅತ್ಯಾಧುನಿಕ ಘಟಕ ಹೊಂದಿದೆ.