ಹಿರಿಯ ಪತ್ರಕರ್ತ ನಾಗರಾಜ್ ನಿಧನ

September 19, 2020

ಬೆಂಗಳೂರು ಸೆ.19 : ಕನ್ನಡದ ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ಸಮಯಗಳಿಂದ ಬಹು ಅಂಗಾಂಗ ವೈಫಲ್ಯ ಮತ್ತು ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಸ್ವಲ್ಪ ಚೇತರಿಕೆ ಕಂಡುಬಂದಿದ್ದರೂ ಮತ್ತೆ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
ಇವರು ಟೈಮ್ಸ್ ಆಫ್ ಇಂಡಿಯಾ, ವಿಜಯ ಕರ್ನಾಟಕ, ಜನಶ್ರೀ, ಟಿವಿ 9 ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ 25 ವರ್ಷಕ್ಕೂ ಹೆಚ್ಚು ಕಾಲ ದುಡಿದಿದ್ದರು. ಪತ್ರಕರ್ತರಲ್ಲದೆ ರಂಗಭೂಮಿಯಲ್ಲೂ ನಟನೆ ಮೂಲಕ ಹಲವು ಹವ್ಯಾಸಿ ರಂಗ ತಂಡಗಳ ಜೊತೆಯೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.
ನಾಗರಾಜ್ ದೀಕ್ಷಿತ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಹಿರಿಯ ಪತ್ರಕರ್ತ ನಾಗರಾಜ್ ದೀಕ್ಷಿತ್ ರವರ ನಿಧನದಿಂದ ಮಾಧ್ಯಮರಂಗ ಪ್ರತಿಭಾವಂತರೊಬ್ಬರನ್ನು ಕಳೆದುಕೊಂಡಂತಾಗಿದೆ, ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

error: Content is protected !!