ಡಿಇಡಿ ದಾಖಲಾತಿಗೆ ಅರ್ಜಿ ಆಹ್ವಾನ

19/09/2020

ಮಡಿಕೇರಿ ಸೆ.19 : ಪ್ರಸಕ್ತ(2020-21) ಸಾಲಿನಲ್ಲಿ ಡಿಇಎಲ್‍ಇಡಿ(ಶಿಕ್ಷಣ ತರಬೇತಿ) ದಾಖಲಾತಿ ಸಂಬಂಧವಾಗಿ ಸರ್ಕಾರಿ ಕೋಟಾದ ಸೀಟುಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿ ಆಸಕ್ತಿ ಹೊಂದಿದ ಅಭ್ಯರ್ಥಿಗಳು ಅದರಲ್ಲಿ ಸಾಮಾನ್ಯ ಅಭ್ಯರ್ಥಿಗಳು ಶೇ.50, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶೇ.45 ಅಂಕ ಪಡೆದಿರಬೇಕು. ಇತರೆ ಸೂಚನೆಗಳನ್ನು ವೆಬ್‍ಸೈಟ್ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಪ್ರಕಟಿಸಲಾಗಿದೆ. ವೆಬ್‍ಸೈಟ್‍ನಲ್ಲಿ ಮಾಹಿತಿಗಳನ್ನು ಕಡ್ಡಾಯವಾಗಿ ಓದಿಕೊಂಡು ಅರ್ಜಿ ಕ್ರಮವಾಗಿ ಭರ್ತಿ ಮಾಡುವುದು. ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗೆ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಅಕ್ಟೋಬರ್, 12 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕವನ್ನು ಬ್ಯಾಂಕ್‍ನಲ್ಲಿ ಡಿ.ಡಿ. ಮೂಲಕ ಪಾವತಿಸಲು ಅಕ್ಟೋಬರ್, 12 ಕೊನೆಯ ದಿನವಾಗಿದೆ (ಸಾಮಾನ್ಯ ಇತರೆ-ರೂ.150, ಪ.ಜಾತಿ, ಪ.ಪಂಗಡ-50). ಹೆಚ್ಚಿನ ಮಾಹಿತಿಗೆ ಡಯಟ್ ಕೂಡಿಗೆಯನ್ನು ದೂ.ಸಂ.08276-278287 ನ್ನು ಸಂಪರ್ಕಿಸಬಹುದು ಎಂದು ಕೂಡಿಗೆ ಡಯಟ್‍ನ ಉಪ ನಿರ್ದೇಶಕರು (ಅಭಿವೃದ್ಧಿ) ಪ್ರಾಂಶುಪಾಲರು ತಿಳಿಸಿದ್ದಾರೆ.