ಸರ್ಕಾರಗಳು ನೆರವಿಗೆ ಬರಲಿ : ಬೆಳೆಗಾರರ ಸಂಘಟನೆಗಳ ಒಕ್ಕೂಟ ಒತ್ತಾಯ

19/09/2020

ಮಡಿಕೇರಿ ಸೆ.19 : ಕಳೆದ ಮೂರು ವರ್ಷಗಳ ಅತಿವೃಷ್ಟಿಯಿಂದ ಜಿಲ್ಲೆಯ ಬೆಳೆಗಾರರು ಅಪಾರ ನಷ್ಟವನ್ನು ಅನುಭವಿಸಿದ್ದು, ಪ್ರಸ್ತುತ ಆರ್ಥಿಕ ಸಂಕಷ್ಟ ಎದುರಾಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣ ನೆರವಿಗೆ ಬರಬೇಕೆಂದು ಕೊಡಗು ಬೆಳೆಗಾರರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಹರೀಶ್ ಅಪ್ಪಯ್ಯ ಮಾತನಾಡಿ, ಜಿಲ್ಲೆಯ ಕಾಫಿ ಬೆಳೆಗಾರರು ಹವಾಗುಣ ವೈಪರೀತ್ಯದ ಅನಾಹುತಗಳಿಂದ ನಷ್ಟವನ್ನು ಅನುಭವಿಸುತ್ತಿದ್ದು, ಈ ಬಗ್ಗೆ ಪ್ರಧಾನಮಂತ್ರಿಗಳು, ಹಣಕಾಸು ಮತ್ತು ವಾಣಿಜ್ಯ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಗಮನ ಸೆಳೆಯಲಾಗಿದೆ ಎಂದರು.