ಮನೆ ನಿರ್ಮಿಸಿ, ಇಲ್ಲ ಪ್ರತಿಭಟನೆ ಎದುರಿಸಿ : ನೆಲ್ಲಿಹುದಿಕೇರಿ ನಿರಾಶ್ರಿತರ ಹೋರಾಟ ಸಮಿತಿ ಎಚ್ಚರಿಕೆ

19/09/2020

ಮಡಿಕೇರಿ ಸೆ.19 : ನೆಲ್ಲಿಹುದಿಕೇರಿ ಗ್ರಾಮದ ನಿವೇಶನ ರಹಿತರಿಗೆ ಮುಂದಿನ ಇಪ್ಪತ್ತು ದಿನಗಳ ಒಳಗಾಗಿ ನಿಗದಿತ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳದಿದ್ದಲ್ಲಿ, ನಿರಾಶ್ರಿತರೆ ಸ್ಥಳಕ್ಕೆ ತೆರಳಿ, ಅಲ್ಲಿನ ಮರಗಳನ್ನು ತೆರವುಗೊಳಿಸಿ ಪ್ರತಿಭಟನೆ ನಡೆಸುವುದಾಗಿ ನೆಲ್ಲಿಹುದಿಕೇರಿ ನಿರಾಶ್ರಿತರ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಪಿ.ಆರ್.ಭರತ್, ನೆಲ್ಲಿಹುದಿಕೇರಿ ನದಿ ದಡದ ಬೆಟ್ಟದಕಾಡು, ಕುಂಬಾರಗುಂಡಿ, ಬರಡಿ, ಕಾರಬಾಣೆÉ ಪ್ರದೇಶಗಳಲ್ಲಿ ಸುಮಾರು ಮೂವತ್ತು ವರ್ಷಗಳಿಂದ ವಾಸಿಸುತ್ತಿರುವ ಕುಟುಂಬಗಳು ಪ್ರತಿವರ್ಷ ಪ್ರವಾಹಕ್ಕೆ ಸಿಲುಕಿ ಅತಂತ್ರ ಪರಿಸ್ಥಿತಿಯನ್ನು ಎದುರಿಸುತ್ತಿರುವುದರಿಂದ ಶಾಶ್ವತ ಪರಿಹಾರವನ್ನು ಸೂಚಿಸಬೇಕೆಂದು ಒತ್ತಾಯಿಸಿದರು.