ವಿವಿಧ ಬೇಡಿಕೆಗಳ ಈಡೇರಿಕೆಗೆ ಹಮಾಲಿ ಕಾರ್ಮಿಕರ ಸಂಘ ಒತ್ತಾಯ

19/09/2020

ಮಡಿಕೇರಿ ಸೆ.19 : ಕಾರ್ಮಿಕರ ಉದ್ಯೋಗಕ್ಕೆ ಸಂಚಕಾರ ತರಲಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ಸರ್ಕಾರ ತಕ್ಷಣ ಹಿಂದಕ್ಕೆ ಪಡೆಯಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.24 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಕೊಡಗು ಜಿಲ್ಲಾ ಹಮಾಲಿ ಕಾರ್ಮಿಕರ ಸಂಘ ತಿಳಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಭರತ್, ಅಧಿವೇಶನದ ಹಂತದಲ್ಲಿ ಹಮಾಲಿ ಕಾರ್ಮಿಕರ ಸಂಕಷ್ಟಗಳ ಬಗ್ಗೆ ಗಮನ ಸೆಳೆÉಯುವ ಸಲುವಾಗಿ ಹೋರಾಟವನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.