ಕೊಡಗಿನ ಹಲವೆಡೆ ಉತ್ತಮ ಮಳೆ

19/09/2020

ಮಡಿಕೇರಿ ಸೆ.19 : ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳೆ ಬಿರುಸಿಗೊಂಡಿದ್ದು, ಮುಂಗಾರು ಆರಂಭದ ವಾತಾವರಣ ನಿರ್ಮಾಣವಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 365 ಮಿ.ಮೀ. ಮಳೆ ಕಡಿಮೆ ಇದ್ದರೂ, ಸಹ ಈ ಬಾರಿ ಆಗಸ್ಟ್ ಮೊದಲ ವಾರದಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಗೆ ಸಾಕಷ್ಟು ನಷ್ಟ ಉಂಟಾಯಿತು.
ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 19.73 ಮಿ.ಮೀ. ಕಳೆದ ವರ್ಷ ಇದೇ ದಿನ 1.21 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2135.88 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2499.27 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 31.25 ಮಿ.ಮೀ. ಕಳೆದ ವರ್ಷ ಇದೇ ದಿನ 3.45 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3014.39 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3406.87 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 19.25 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1951.10 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2376.84 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.70 ಮಿ.ಮೀ. ಕಳೆದ ವರ್ಷ ಇದೇ ದಿನ 0.17 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1442.17 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1714.11 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 28.60, ನಾಪೋಕ್ಲು 26.40, ಸಂಪಾಜೆ 24.80, ಭಾಗಮಂಡಲ 45.20, ವಿರಾಜಪೇಟೆ ಕಸಬಾ 25.80, ಹುದಿಕೇರಿ 44, ಶ್ರೀಮಂಗಲ 16, ಪೊನ್ನಂಪೇಟೆ 15.20, ಅಮ್ಮತ್ತಿ 4.50, ಬಾಳೆಲೆ 10, ಸೋಮವಾರಪೇಟೆ ಕಸಬಾ 8.40, ಶನಿವಾರಸಂತೆ 6.40, ಶಾಂತಳ್ಳಿ 12.20, ಕೊಡ್ಲಿಪೇಟೆ 8.80, ಕುಶಾಲನಗರ 5.40, ಸುಂಟಿಕೊಪ್ಪ 11 ಮಿ.ಮೀ.ಮಳೆಯಾಗಿದೆ.