ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಂಪಾಜೆಯಲ್ಲಿ ಸನ್ಮಾನ

19/09/2020

ಮಡಿಕೇರಿ ಸೆ.19 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಸಂಪಾಜೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಆಶ್ರಯ ದಲ್ಲಿ, ದಿ.ಸಣ್ಣಯ್ಯ ಪಟೇಲ್ ದತ್ತಿ ಉಪನ್ಯಾಸ ಮತ್ತು ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು. ಸಂಪಾಜೆ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಅವರು ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.