ಹಾರಂಗಿಯಿಂದ 11 ಸಾವಿರ ಕ್ಯುಸೆಕ್ ನೀರು ಬಿಡುಗಡೆ

20/09/2020

ಮಡಿಕೇರಿ ಸೆ.20 : ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ನದಿಗೆ 11,000 ಕ್ಯುಸೆಕ್ ನದಿಗೆ ಕ್ರೆಸ್ಟ್‍ಗೇಟ್‍ಗಳ ಮೂಲಕ ನದಿಗೆ ಹರಿಸಲಾಗುತ್ತಿದೆ.
ಅಣೆಕಟ್ಟೆಗೆ ಒಳ ಹರಿವಿನ ಪ್ರಮಾಣ 16,000 ಕ್ಯುಸೆಕ್‍ನಷ್ಟಿದ್ದು, ಅಣೆಕಟ್ಟೆಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಿಯಮಾನುಸಾರ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಈಗಾಗಲೇ ಅಣೆಕಟ್ಟೆಗೆ ಹೆಚ್ಚು ನೀರು ಬರುತ್ತಿರುವ ಕಾರಣದಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಅಣೆಕಟ್ಟೆಯಲ್ಲಿ ಹೆಚ್ಚು ನೀರು ಸಂಗ್ರಹಿಸದಂತೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಅಣೆಕಟ್ಟೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಲಾಶಯಕ್ಕೆ ಒಳಹರಿವಿನ ಪ್ರಮಾಣವನ್ನು ಕ್ರಮಬದ್ಧವಾಗಿ ನೋಡಿಕೊಂಡು ಹೆಚ್ಚುವರಿ ನೀರನ್ನು ಸಂಗ್ರಹಿಸದೆ ನದಿಗೆ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿರುತ್ತಾರೆ.
ಈಗಾಗಲೇ ನದಿಗೆ ಹೆಚ್ಚು ನೀರು ಬರುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ವತಿಯಿಂದ ಸೂಚನೆ ನೀಡಲಾಗಿದೆ ಎಂದು ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ ತಿಳಿಸಿದ್ದಾರೆ.